ಪುತ್ತೂರು: ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಕಡಬದ ಯುವತಿಯೊಬ್ಬಳನ್ನು ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿದ ಆರೋಪದಡಿ ನೆಲ್ಲಿಗುಂಡಿ ನಿವಾಸಿ ಜಯರಾಮ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.23ರಂದು ಯುವತಿಯನ್ನು ಪುತ್ತೂರಿಗೆ ಕರೆಸಿಕೊಂಡ ಆರೋಪಿ, ಯಾರೂ ಇಲ್ಲದ ಮನೆಗೆ ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಯುವತಿ ತಪ್ಪಿಸಿಕೊಂಡು ಬಂದಾಗ, ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕವೂ ಆರೋಪಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ಮನೆಯವರಿಗೆ ವಿಷಯ ತಿಳಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಪುತ್ತೂರು ಮಹಿಳಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

