ಹೊಳೆಹೊನ್ನೂರು: ಸಮೀಪದ ಆನವೇರಿಯಲ್ಲಿ ಬುಧವಾರ ಟಗರು ಕಾಳಗ ವೀಕ್ಷಿಸಲು ಬಂದಿದ್ದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಸುನೀಲ್ (22) ಎಂಬ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಬದಿ ಕುಳಿತಿದ್ದ ಯುವಕರ ಮೇಲೆ ಮಣ್ಣು ಸಿಡಿದಿದ್ದರಿಂದ ಜಗಳ ಆರಂಭವಾಗಿದೆ. ಬಳಿಕ ಶಿವಮೊಗ್ಗದಿಂದ ಬಂದಿದ್ದ 8-10 ಜನರ ಗುಂಪು ಟೀ ಅಂಗಡಿ ಬಳಿ ಸುನೀಲ್ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕುವಿನಿಂದ ಇರಿದಿದೆ. ಜಗಳ ಬಿಡಿಸಲು ಬಂದ ನಾಲ್ಕೈದು ಮಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ಸುನೀಲ್ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಟಗರು ಕಾಳಗಕ್ಕೆ ಅನುಮತಿ ನೀಡಿದ ಪೊಲೀಸರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
