ಮಂಡ್ಯ: ನಾಗಮಂಗಲ–ಮಂಡ್ಯ ರಸ್ತೆಯಲ್ಲಿರುವ ಪದವಿ ಕಾಲೇಜಿನ ಉಪನ್ಯಾಸಕ ಗಂಗೂ, ವಿದ್ಯಾರ್ಥಿನಿಯರ ಮೊಬೈಲ್ ಸಂಖ್ಯೆ ಪಡೆದು ವಾಟ್ಸಾಪ್‌ನಲ್ಲಿ ‘ಐ ಲವ್ ಯು’, ‘ಐ ಲೈಕ್ ಯು’ ಎಂದು ನಿರಂತರ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿದೆ. ಉಪನ್ಯಾಸಕನ ವರ್ತನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿನಿಯರು ಸ್ಟಾಫ್ ರೂಂಗೆ ನುಗ್ಗಿ ಆತನನ್ನು ತರಾಟೆಗೆ ತೆಗೆದುಕೊಂಡು ಥಳಿಸಿದ್ದಾರೆ. ಈ ವೇಳೆ ಉಪನ್ಯಾಸಕ ವಿದ್ಯಾರ್ಥಿನಿಯರ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ್ದು, ಅವರಿಂದ ತಪ್ಪಿಸಿಕೊಳ್ಳಲು ಬೀರುಗಳ ಸಂದಿಯಲ್ಲಿ ಅಡಗಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿತ ಉಪನ್ಯಾಸಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

