ಹಾಸನ: ತನ್ನ ಗುರುತಿನ ಚೀಟಿಯನ್ನು ಅನ್ಯ ವ್ಯಕ್ತಿಗಳಿಗೆ ನೀಡಿ ಹಾಸನಾಂಬ ದೇವಸ್ಥಾನಕ್ಕೆ ಅನಧಿಕೃತ ಪ್ರವೇಶ ಕಲ್ಪಿಸಿದ ಆರೋಪದ ಮೇಲೆ ತಾಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಉದಯ್ ನಾಗರಾಜ್ ಅವರನ್ನು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಹಾಸನಾಂಬ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಅಮಾನತು ಆದೇಶ ಜಾರಿಗೊಳಿಸಲಾಗಿದೆ. ಇತ್ತ ಜಾತ್ರೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಎಸ್‌ಪಿ ಶುಭನ್ವಿತಾ ಸ್ಥಳದಲ್ಲೇ ಮೊಕ್ಕಾಂ ಹೂಡಿ, ಧರ್ಮ ದರ್ಶನ ಹಾಗೂ ₹300 ಮತ್ತು ₹1,000 ವಿಶೇಷ ದರ್ಶನದ ಸಾಲುಗಳನ್ನು ಪರಿಶೀಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

