ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಟೆಕಿ ಮಹೇಂದ್ರ ಹಾಗೂ ಆತನ ಸ್ನೇಹಿತ ತರುಣ್‌ನನ್ನು ಅಪಹರಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತೆ ಸೇರಿದಂತೆ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 28ರಂದು ಐದು ಬೈಕ್‌ಗಳಲ್ಲಿ ಬಂದ ಆರೋಪಿಗಳು ಇಬ್ಬರನ್ನು ಅಪಹರಿಸಿದ್ದರು. ಮಹೇಂದ್ರನ ತಂದೆ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರು ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಸಂತ್ರಸ್ತೆಯ ಪ್ರತ್ಯೇಕ ದೂರಿನ ಮೇರೆಗೆ ಮಹೇಂದ್ರ (23) ಹಾಗೂ ಕೃತ್ಯಕ್ಕೆ ಸಹಕರಿಸಿದ ಆರೋಪದ ಮೇಲೆ ತರುಣ್ (23)ನನ್ನೂ ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

