ಬೆಂಗಳೂರು: ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಸೋಣೆನಹಳ್ಳಿ ಸರ್ಕಲ್ ಬಳಿಯ ಖಾಲಿ ಜಾಗದಲ್ಲಿ ಅನುಮಾನಾಸ್ಪದ ಸ್ಫೋಟಕ ಮಾದರಿಯ ವಸ್ತು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪತ್ತೆಯಾದ ವಸ್ತು ಡೈನಾಮೈಟ್ ಮಾದರಿಯ ಸ್ಫೋಟಕವಾಗಿರಬಹುದು ಎಂದು ಶಂಕಿಸಿದ್ದಾರೆ. ಪೊಲೀಸರು ಸ್ಥಳವನ್ನು ಸುತ್ತುವರಿದು ಸುರಕ್ಷತಾ ಕ್ರಮ ಕೈಗೊಂಡಿದ್ದು, ಹೆಚ್ಚಿನ ಪರಿಶೀಲನೆಗಾಗಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನ ದಳಕ್ಕೆ ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

