Breaking News

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಳಗಾವಿಯ ಚಿಕ್ಕೋಡಿ ಹಾಗೂ ಅಥಣಿ ತಾಲೂಕುಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕೋಡಿ-ಮಹಾಲಿಂಗಪುರ ರಸ್ತೆಯಲ್ಲೇ ರೈತರು ಉಪಹಾರ ತಯಾರಿಸಿ ವಿನೂತನ ಪ್ರತಿಭಟನೆ ನಡೆಸಿದರು. ಹಲವೆಡೆ ರಸ್ತೆ ತಡೆ ನಡೆಸಿದ್ದರಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಹೋರಾಟ ತೀವ್ರಗೊಳ್ಳುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಬ್ಬು ಬೆಳೆಗಾರರಿಗೆ ಶೀಘ್ರ ನ್ಯಾಯ ಒದಗಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಮುಖಂಡರು ಎಚ್ಚರಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *