Breaking News

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ಬೆಂಕಿ: ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಬೆಂಗಳೂರು: ಕೋರಮಂಗಲ ಸಮೀಪದ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಬಸ್‌ನಲ್ಲಿ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಪ್ರಯಾಣಿಕರು ಇಳಿದ ಬಳಿಕ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ದೊಡ್ಡ ಅನಾಹುತ ತಪ್ಪಿದೆ. ಘಟನೆಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *