ಉಡುಪಿ: ಪ್ರೇಮ ಪ್ರಕರಣದ ಹಿನ್ನೆಲೆಯಲ್ಲಿ ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 27 ವರ್ಷದ ಪ್ರದೀಪ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಅ.30ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಪ್ರದೀಪ್ ಮೇಲೆ ಅ.27ರಂದು ಯುವತಿಯ ಸಹೋದರರು ಹಾಗೂ ಇತರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ಅವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಹಲ್ಲೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಸಹೋದರ ದೂರು ನೀಡಿದ್ದಾರೆ. ಈ ಸಂಬಂಧ ಯುವತಿ ಸೇರಿದಂತೆ ಹಲವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಇದೇ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಪ್ರದೀಪ್ ವಿರುದ್ಧವೂ ದೂರು ದಾಖಲಾಗಿದ್ದು, ಅತ್ಯಾಚಾರ ಆರೋಪದಡಿ ಬಂಧನವಾಗಿತ್ತು. ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

