Breaking News

ಮೊಬೈಲ್‌ನಿಂದ ಪ್ರಶ್ನೆಪತ್ರಿಕೆ ಸ್ಕ್ಯಾನ್ ಮಾಡಿ ಉತ್ತರ ಹುಡುಕಿದ ‘ಟಾಪರ್’ ಬಂಧನ!

ಹಾವೇರಿ: ವಿಎಒ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿದ್ದ ಹಾನಗಲ್ಲ ಮೂಲದ ಶಂಕರ ಬನ್ನೂರು ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಬಳಸಿ ಉತ್ತರ ಹುಡುಕಿರುವುದು ತನಿಖೆಯಲ್ಲಿ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಕೆಇಎ ನಡೆಸಿದ ವಿಎಒ ಪರೀಕ್ಷೆಯಲ್ಲಿ ಶಂಕರ 151.25 ಅಂಕ ಗಳಿಸಿದ್ದರೆ, ಅದಕ್ಕೂ 15 ದಿನಗಳ ಹಿಂದೆ ನಡೆದ ಕೆಎಸ್‌ಆರ್‌ಪಿ ಕಾನ್‌ಸ್ಟೆಬಲ್ ಪರೀಕ್ಷೆಯಲ್ಲಿ ಕೇವಲ 25 ಅಂಕ ಪಡೆದಿದ್ದ. ಈ ಅಂಕಗಳ ವ್ಯತ್ಯಾಸ ಅನುಮಾನಕ್ಕೆ ಕಾರಣವಾಗಿತ್ತು. ತನಿಖೆಯಲ್ಲಿ ಶಿಗ್ಗಾಂವ ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಮೂಲಕ ಪ್ರಶ್ನೆಪತ್ರಿಕೆಯನ್ನು ಗೂಗಲ್ ಲೆನ್ಸ್‌ನಲ್ಲಿ ಸ್ಕ್ಯಾನ್ ಮಾಡಿ ಉತ್ತರ ಹುಡುಕಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಪರೀಕ್ಷಾ ಕೇಂದ್ರದ ಭದ್ರತೆ ಹಾಗೂ ಮೇಲ್ವಿಚಾರಕರ ಕರ್ತವ್ಯಲೋಪದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *