Breaking News

ಅಪ್ರಾಪ್ತ ವಯಸ್ಕ ಬಾಲಿಕಿಯ ಮೇಲೆ ಲೈಂಗಿಕ ದೌರ್ಜನ್ಯ: ಭಿನ್ನಕೋಮಿನ ಯುವಕನ ವಿರುದ್ಧ ಪೋಕ್ಸೋ ಕೇಸ್‌ ದಾಖಲು

ಕಲಬುರಗಿ: ಜೇವರ್ಗಿ ತಾಲೂಕಿನಲ್ಲಿ ಪ್ರಾಪ್ತ ವಯಸ್ಕಳಲ್ಲದ ಬಾಲಕಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಸ್ಮಾಯಿಲ್ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುಗಾದಿ ಹಬ್ಬದ ವೇಳೆ ಬಾಲಕಿಗೆ ಪರಿಚಯವಾಗಿದ್ದ ಆರೋಪಿ, ಬಳಿಕ ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಕುಟುಂಬದವರು ಎಚ್ಚರಿಕೆ ನೀಡಿದ್ದರೂ ಆತನ ವರ್ತನೆ ಬದಲಾಗಿರಲಿಲ್ಲ. ಅಕ್ಟೋಬರ್ 29ರಂದು ರಾತ್ರಿ ಮನೆಯವರು ಇಲ್ಲದ ಸಮಯದಲ್ಲಿ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಪೋಷಕರು ದೂರು ನೀಡಿದ್ದಾರೆ. ಜೇವರ್ಗಿ ಪೊಲೀಸರು ಬಿಎನ್‌ಎಸ್ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *