Breaking News

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಯಚೂರಿನ ಜಲಾಲನಗರದಲ್ಲಿ ನಡೆದಿದೆ. ಮೃತರನ್ನು ವಿಷ್ಣು (45), ಪತ್ನಿ ಅರುಣಾ (36), ಮಗ ಶ್ಲೋಕ (10) ಹಾಗೂ ಮಗಳು ಖುಷಿ (7) ಎಂದು ಗುರುತಿಸಲಾಗಿದೆ. ಮನೆಯವರು ಮಲಗಿದ್ದಾಗ ವಿಷ್ಣು ಈ ಕೃತ್ಯ ಎಸಗಿ, ಬಳಿಕ ಚಿಕ್ಕಸುಗೂರು ಗ್ರಾಮದ ಬಳಿ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಸ್ಪಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ. ಘಟನೆಯಲ್ಲಿ ಹಿರಿಯ ಮಗ ಸುಹಾಸ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪ್ರಕರಣ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಿಕಿಯ ಮೇಲೆ ಲೈಂಗಿಕ ದೌರ್ಜನ್ಯ: ಭಿನ್ನಕೋಮಿನ ಯುವಕನ ವಿರುದ್ಧ ಪೋಕ್ಸೋ ಕೇಸ್‌ ದಾಖಲು

ಕಲಬುರಗಿ: ಜೇವರ್ಗಿ ತಾಲೂಕಿನಲ್ಲಿ ಪ್ರಾಪ್ತ ವಯಸ್ಕಳಲ್ಲದ ಬಾಲಕಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಸ್ಮಾಯಿಲ್ …

Leave a Reply

Your email address will not be published. Required fields are marked *