Breaking News

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಿಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಕಲೇಶಪುರ ತಾಲೂಕಿನ ಬಾಳಗೋಡು ಗ್ರಾಮದಲ್ಲಿ ನಡೆದಿದೆ. ಮಂಗಳೂರಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹಿಮಾಳಿಗೆ ನೌಶಾದ್ ಎಂಬಾತ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಇಬ್ಬರೂ ಜೊತೆಯಾಗಿ ತೆಗೆಸಿಕೊಂಡ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಫೋಟೋ ಅಳಿಸುವಂತೆ ಮನವಿ ಮಾಡಿದರೂ ನಿರಾಕರಿಸಿ ಬೆದರಿಕೆ ಹಾಕಿದ್ದರಿಂದ ಮನನೊಂದ ಹಿಮಾ ವಿಷ ಸೇವಿಸಿದ್ದಾಳೆ. ಯುವತಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪದ ಕುರಿತು ತನಿಖೆ ಮುಂದುವರಿದಿದೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಿಕಿಯ ಮೇಲೆ ಲೈಂಗಿಕ ದೌರ್ಜನ್ಯ: ಭಿನ್ನಕೋಮಿನ ಯುವಕನ ವಿರುದ್ಧ ಪೋಕ್ಸೋ ಕೇಸ್‌ ದಾಖಲು

ಕಲಬುರಗಿ: ಜೇವರ್ಗಿ ತಾಲೂಕಿನಲ್ಲಿ ಪ್ರಾಪ್ತ ವಯಸ್ಕಳಲ್ಲದ ಬಾಲಕಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಸ್ಮಾಯಿಲ್ …

Leave a Reply

Your email address will not be published. Required fields are marked *