Breaking News

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಅಟ್ಟಹಾಸ: ಬೆನ್ನಟ್ಟಿ ಬೈಕ್ ಗೆ ಒದ್ದ ಏಜೆಂಟ್: ಕೆಳಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ನೆಲಮಂಗಲದಲ್ಲಿ ಬೈಕ್ ಸಾಲದ ಕಂತು ಪಾವತಿಸದ ಕಾರಣ ಮೈಕ್ರೋ ಫೈನಾನ್ಸ್ ಏಜೆಂಟರು ಬೈಕ್‌ಗೆ ಒದ್ದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಮುರುಳಿ (39) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಎಲ್ ಅಂಡ್ ಟಿ ಮೈಕ್ರೋ ಫೈನಾನ್ಸ್‌ನ ಮೂವರು ಏಜೆಂಟರು ಬೈಕ್ ಅಡ್ಡಹಾಕಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಈಗಾಗಲೇ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮುರುಳಿ ನಿರಂತರ ಡಯಾಲಿಸಿಸ್ ಪಡೆಯುತ್ತಿದ್ದರು. ಗಾಯಗೊಂಡ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಏಜೆಂಟರ ಹಲ್ಲೆಯೇ ಪತಿಯ ಸಾವಿಗೆ ಕಾರಣ ಎಂದು ಪತ್ನಿ ಲಲಿತಾ ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

Share News

About BigTv News

Check Also

ಸಕಲೇಶಪುರ:ಇನ್‌ಸ್ಟಾಗ್ರಾಂನಲ್ಲಿ ಖಾಸಗಿ ಫೋಟೋ ಹಾಕಿದ್ದಕ್ಕೆ ಬಿ.ಇ.ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ: ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿ ಬೆದರಿಕೆ ಹಾಕಿದ್ದರಿಂದ ಮನನೊಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

Leave a Reply

Your email address will not be published. Required fields are marked *