Breaking News

ಕಲಬುರಗಿಯಲ್ಲಿ ಶೀಲ ಶಂಕಿಸಿ ಪತಿಯಿಂದ ಪತ್ನಿಯ ಹತ್ಯೆ: ಕೊಡಲಿಯಿಂದ ಕೊಚ್ಚಿ ಪರಾರಿ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ತಾಂಡಾದ ನೀಲಾಬಾಯಿ ರಾಠೋಡ್ (32) ಅವರನ್ನು ಪತಿ ನಾಮದೇವ ರಾಠೋಡ್ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ದಂಪತಿಗೆ ಮೂವರು ಮಕ್ಕಳಿದ್ದು, ಪತ್ನಿಯ ನಡವಳಿಕೆ ಬಗ್ಗೆ ಪತಿ ಅನುಮಾನಪಡುತ್ತಿದ್ದ ಎನ್ನಲಾಗಿದೆ. ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿದ್ದ ನಾಮದೇವನ ಹಿಂಸೆ ತಾಳಲಾರದೆ ನೀಲಾಬಾಯಿ ಕೆಲ ದಿನಗಳ ಹಿಂದೆ ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದರು. ಹಿರಿಯರ ಸಂಧಾನದ ಬಳಿಕ ಮತ್ತೆ ಗಂಡನ ಮನೆಗೆ ಮರಳಿದ್ದರು. ಇತ್ತೀಚೆಗೆ ಮನೆಯಲ್ಲಿ ಮಲಗಿದ್ದ ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆಗೈದು ಆರೋಪಿ ಪರಾರಿಯಾಗಿದ್ದಾನೆ. ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಸಕಲೇಶಪುರ:ಇನ್‌ಸ್ಟಾಗ್ರಾಂನಲ್ಲಿ ಖಾಸಗಿ ಫೋಟೋ ಹಾಕಿದ್ದಕ್ಕೆ ಬಿ.ಇ.ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ: ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿ ಬೆದರಿಕೆ ಹಾಕಿದ್ದರಿಂದ ಮನನೊಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

Leave a Reply

Your email address will not be published. Required fields are marked *