Breaking News

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, ಪರಶುರಾಮ ಅವರನ್ನು ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಮೋದ್ ಹಾಗೂ ಭಾವನಾ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿರ್ಧರಿಸಿದ್ದರು. ಯುವತಿ ಕಳುಹಿಸಿದ ಪತ್ರದ ಹಿನ್ನೆಲೆಯಲ್ಲಿ ಪ್ರಮೋದ್ ಸ್ನೇಹಿತರೊಂದಿಗೆ ಆಕೆಯನ್ನು ಕರೆದುಕೊಂಡು ಹೋಗಲು ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಯುವತಿಯ ಕುಟುಂಬಸ್ಥರು ಮೂವರನ್ನು ಹಿಡಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ಟೋಬರ್ 27ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಸಕಲೇಶಪುರ:ಇನ್‌ಸ್ಟಾಗ್ರಾಂನಲ್ಲಿ ಖಾಸಗಿ ಫೋಟೋ ಹಾಕಿದ್ದಕ್ಕೆ ಬಿ.ಇ.ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ: ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿ ಬೆದರಿಕೆ ಹಾಕಿದ್ದರಿಂದ ಮನನೊಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

Leave a Reply

Your email address will not be published. Required fields are marked *