ಬೆಂಗಳೂರು: ನಿಧಾನವಾಗಿ ವಾಹನ ಚಲಾಯಿಸುವಂತೆ ಹೇಳಿದ್ದಕ್ಕೆ ಆಟೋ ಚಾಲಕ ವೆಂಕಟೇಶ್ ಅವರ ಮೇಲೆ ಅಪ್ಪ-ಮಗ ಸೇರಿದಂತೆ ಮೂವರು ಹೆಲ್ಮೆಟ್‌ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೆಂಕಟೇಶ್ ಕುಟುಂಬದೊಂದಿಗೆ ವಿವೇಕನಗರದಿಂದ ಆಸ್ಟಿನ್ ಟೌನ್‌ಗೆ ತೆರಳುತ್ತಿದ್ದಾಗ ಬೈಕ್ ಸವಾರನಿಗೆ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಮೂವರು ಆಟೋ ಅಡ್ಡಗಟ್ಟಿ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ವೆಂಕಟೇಶ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ರಕ್ತಸ್ರಾವದಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಆರೋಪಿಗಳು ಆಸ್ಪತ್ರೆಗೆ ಕರೆದೊಯ್ಯಲು ನೆರವಾಗದೆ ಬೈಕ್ ಕೀ ಪಡೆದುಕೊಂಡು ಪರಾರಿಯಾಗಿದ್ದಾರೆ. ಸದ್ಯ ಗಾಯಾಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
