Breaking News

ಕೋಟ: ತಾಯಿ ಜೊತೆ ಸಂಬಂಧಿಕರ ಮನೆಗೆ ಬಂದ ವ್ಯಕ್ತಿಯ ಮೇಲೆ ಹಲ್ಲೆ, ಕೊಲೆ ಬೆದರಿಕೆ : 8 ಮಂದಿ ವಿರುದ್ಧ ಎಫ್‌ಐಆರ್‌

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಸ್ಕತ್ತೂರು ಗ್ರಾಮದಲ್ಲಿ ಸಂಬಂಧಿಕರ ಮನೆಗೆ ತಾಯಿಯೊಂದಿಗೆ ತೆರಳಿದ್ದ ದಿನೇಶ್ ಆಚಾರ್ (40) ಎಂಬುವವರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ನವೆಂಬರ್ 1ರಂದು ಬೆಳಗ್ಗೆ ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಆರೋಪಿಗಳು ವಾಹನವನ್ನು ಅಡ್ಡಗಟ್ಟಿ, ದಿನೇಶ್ ಅವರನ್ನು ಕೆಳಗಿಳಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ದಿನೇಶ್ ಆಚಾರ್ ನೀಡಿದ ದೂರಿನ ಮೇರೆಗೆ ಗಣೇಶ, ಮಹೇಶ, ಕೃಷ್ಣ, ರಾಜು, ದಿನೇಶ ಸೇರಿದಂತೆ 8 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *