Breaking News

ಹಾಸ್ಟೆಲ್‌ ಬಳಿಯ ಗುಜರಿ ಅಂಗಡಿಯಲ್ಲಿ ಬೆಂಕಿ ಅವಘಡ

ದಾವಣಗೆರೆಯ ವಿದ್ಯಾರ್ಥಿ ಭವನ ಸಮೀಪದ ಕೆಟಿಜೆ ನಗರದ 8ನೇ ಕ್ರಾಸ್‌ನಲ್ಲಿರುವ ಗುಜರಿ ಅಂಗಡಿಯಲ್ಲಿ ಸೋಮವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಟಾಟಾ ಏಸ್ ವಾಹನ ಸೇರಿದಂತೆ ಹಳೆಯ ಗುಜರಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಪ್ಲಾಸ್ಟಿಕ್ ವಸ್ತುಗಳು, ಬಾಟಲಿಗಳು, ಫ್ರಿಜ್‌ಗಳು ಹಾಗೂ ಬ್ಯಾಟರಿಗಳಿದ್ದ ಕಾರಣ ಬೆಂಕಿ ವೇಗವಾಗಿ ವ್ಯಾಪಿಸಿ ದಟ್ಟ ಹೊಗೆ ಆವರಿಸಿತ್ತು. ಪಕ್ಕದಲ್ಲೇ ವಿದ್ಯುತ್ ಪರಿವರ್ತಕವಿದ್ದ ಕಾರಣ ಸ್ಥಳೀಯರು ಆತಂಕಗೊಂಡಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಸುಮಾರು ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿವೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಕುಷ್ಟಗಿಯಲ್ಲಿ ಘೋರ ದುರಂತ: ಮೂವರು ಮಕ್ಕಳಿಗೆ ವಿಷ ಕುಡಿಸಿ ತಂದೆಯೂ ಆತ್ಮಹತ್ಯೆಗೆ ಯತ್ನ!

ಕುಷ್ಟಗಿ ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಮದ್ಯವ್ಯಸನಿ ತಂದೆಯೊಬ್ಬ ತನ್ನ 10, 8 ಮತ್ತು 5 ವರ್ಷದ ಮೂವರು ಮಕ್ಕಳಿಗೆ ವಿಷ …

Leave a Reply

Your email address will not be published. Required fields are marked *