ಕುಷ್ಟಗಿ ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಮದ್ಯವ್ಯಸನಿ ತಂದೆಯೊಬ್ಬ ತನ್ನ 10, 8 ಮತ್ತು 5 ವರ್ಷದ ಮೂವರು ಮಕ್ಕಳಿಗೆ ವಿಷ ಕುಡಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಸಣ್ಣ ಗುಂಡಪ್ಪ ಚಳ್ಳಾರಿ ಎಂಬಾತ ಪತ್ನಿಯೊಂದಿಗೆ ನಿರಂತರ ಜಗಳವಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಪತ್ನಿ ಮಕ್ಕಳನ್ನು ಬಿಟ್ಟು ತವರು ಮನೆ ಸೇರಿದ್ದಳು. ಬಳಿಕ ಮಕ್ಕಳೊಂದಿಗೆ ಬೆಂಗಳೂರಿಗೆ ತೆರಳಿದ್ದ ಗುಂಡಪ್ಪ, ಮಕ್ಕಳನ್ನು ಸಾಕಲು ಕಷ್ಟವಾಗಿ ಊರಿಗೆ ಮರಳುವ ವೇಳೆ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ವಿಷ ಸೇವನೆಯಿಂದ ನಾಲ್ವರೂ ಗಂಭೀರ ಅಸ್ವಸ್ಥಗೊಂಡಿದ್ದು, ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಹಾಗೂ ತಂದೆಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಷ್ಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
