ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಕಾರ್ಮಿಕರ ವಾಸ್ತವ್ಯಕ್ಕಾಗಿ ನಿರ್ಮಿಸಿದ್ದ 20ಕ್ಕೂ ಹೆಚ್ಚು ತಾತ್ಕಾಲಿಕ ಶೆಡ್‌ಗಳು ಸುಟ್ಟು ಭಸ್ಮವಾಗಿವೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಬೆಂಕಿ ಶೆಡ್‌ಗಳಿಗೆ ವ್ಯಾಪಿಸಿದ್ದು, ಒಳಗಿದ್ದ ದಿನಬಳಕೆಯ ವಸ್ತುಗಳು ಸುಟ್ಟುಹೋಗಿವೆ. ಘಟನೆಯ ವೇಳೆ ಬಹುತೇಕ ಕಾರ್ಮಿಕರು ಕೆಲಸಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳು ಸಂಭವಿಸಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಫರಹತಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಫೋಟಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
