Breaking News

ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಾಣ ಪ್ರಶ್ನಿಸಿದ್ದಕ್ಕೆ ಹಲ್ಲೆ-

ಬೆಂಗಳೂರು ಉತ್ತರ ತಾಲೂಕಿನ ಕಾಡಸೊಣ್ಣಪನಹಳ್ಳಿ ಗ್ರಾಮದಲ್ಲಿ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದನ್ನು ಪ್ರಶ್ನಿಸಿದ ಕುಟುಂಬದವರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಮಾರುತಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ನಗರಗಿರಿ ಟೌನ್‌ಶಿಪ್ ಯೋಜನೆಗಾಗಿ ಜೆಸಿಬಿ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಇದನ್ನು ಪ್ರಶ್ನಿಸಿದ ಮಾರುತಿ ಹಾಗೂ ಅವರ ಕುಟುಂಬದ ಮಹಿಳೆಯರು, ವೃದ್ಧರು ಸೇರಿದಂತೆ ಹಲವರ ಮೇಲೆ ಗುಂಪು ಹಲ್ಲೆ ನಡೆಸಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಕುಟುಂಬಸ್ಥರು ಬಾಗಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಮೀನು ಒತ್ತುವರಿ ಹಾಗೂ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Share News

About BigTv News

Check Also

ಕುಷ್ಟಗಿಯಲ್ಲಿ ಘೋರ ದುರಂತ: ಮೂವರು ಮಕ್ಕಳಿಗೆ ವಿಷ ಕುಡಿಸಿ ತಂದೆಯೂ ಆತ್ಮಹತ್ಯೆಗೆ ಯತ್ನ!

ಕುಷ್ಟಗಿ ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಮದ್ಯವ್ಯಸನಿ ತಂದೆಯೊಬ್ಬ ತನ್ನ 10, 8 ಮತ್ತು 5 ವರ್ಷದ ಮೂವರು ಮಕ್ಕಳಿಗೆ ವಿಷ …

Leave a Reply

Your email address will not be published. Required fields are marked *