Breaking News

ಮದ್ದೂರಲ್ಲಿ ಗಲಾಟೆ ಬಿಡಿಸಲು ಹೋದವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಅಮಾಯಕ ಯುವಕ ಬಲಿ!

ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದಲ್ಲಿ ಹಣದ ವಿಚಾರವಾಗಿ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದ ನಂದನ್ (25) ಎಂಬ ಯುವಕನನ್ನು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಲಾಗಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಕೆಲಸದ ಹಣದ ವಿಚಾರವಾಗಿ ರಘು ಮತ್ತು ಪ್ರಕಾಶ್ ನಡುವೆ ಗಲಾಟೆ ನಡೆದಿತ್ತು. ಇದನ್ನು ಬಿಡಿಸಲು ಹೋದ ನಂದನ್ ಮೇಲೆ ಆರೋಪಿಗಳು ತಿರುಗಿಬಿದ್ದಿದ್ದು, ಶಿವರಾಜು ಎಂಬಾತ ಡ್ರ್ಯಾಗನ್ ಮಾದರಿಯ ಮಾರಕಾಸ್ತ್ರದಿಂದ ಕುತ್ತಿಗೆಗೆ ಇರಿದಿದ್ದಾನೆ ಎನ್ನಲಾಗಿದೆ. ತೀವ್ರ ರಕ್ತಸ್ರಾವದಿಂದ ನಂದನ್ ಮೃತಪಟ್ಟಿದ್ದು, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Share News

About BigTv News

Check Also

ಕುಷ್ಟಗಿಯಲ್ಲಿ ಘೋರ ದುರಂತ: ಮೂವರು ಮಕ್ಕಳಿಗೆ ವಿಷ ಕುಡಿಸಿ ತಂದೆಯೂ ಆತ್ಮಹತ್ಯೆಗೆ ಯತ್ನ!

ಕುಷ್ಟಗಿ ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಮದ್ಯವ್ಯಸನಿ ತಂದೆಯೊಬ್ಬ ತನ್ನ 10, 8 ಮತ್ತು 5 ವರ್ಷದ ಮೂವರು ಮಕ್ಕಳಿಗೆ ವಿಷ …

Leave a Reply

Your email address will not be published. Required fields are marked *