ಬೆಂಗಳೂರು: ನಕಲಿ ಔಷಧಿ ತಯಾರಿಕೆ ಮತ್ತು ಮಾರಾಟ ಜಾಲದ ವಿರುದ್ಧ ಇಡಿ ಅಧಿಕಾರಿಗಳು ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ 5 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಮುಖ ಆರೋಪಿ ವೀರೇಶ್ ಕುಮಾರ್‌ನ ಬ್ಯಾಂಕ್ ಖಾತೆ ಫ್ರೀಜ್ ಮಾಡಿ, 9 ಲಕ್ಷ ರೂ. ಜಪ್ತಿ ಮಾಡಿದ್ದಾರೆ. ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ನಕಲಿ ಔಷಧಿಗಳನ್ನು ತಯಾರಿಸಿ, ಮರುಪ್ಯಾಕಿಂಗ್ ಮಾಡಲಾಗುತ್ತಿತ್ತು. ಸಾಮಾನ್ಯ ಔಷಧಿಗಳಿಗೆ ಫಿಜರ್ ಕಂಪನಿಯ ದುಬಾರಿ ಇಂಜೆಕ್ಷನ್‌ಗಳ ನಕಲಿ ಲೇಬಲ್ ಅಂಟಿಸಿ ಮಾರಾಟ ಮಾಡಲಾಗುತ್ತಿತ್ತು. ಡಿಎಂ ಫಾರ್ಮಾಸ್ಯುಟಿಕಲ್ಸ್ ಮತ್ತು ಕೃಪಾ ಹೆಲ್ತ್‌ಕೇರ್ ಮೂಲಕ ನಕಲಿ ಔಷಧಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ದಾಳಿಯಲ್ಲಿ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಮಹತ್ವದ ದಾಖಲೆಗಳನ್ನು ಇಡಿ ವಶಪಡಿಸಿಕೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

