Breaking News

ಕಲಬುರಗಿ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: ಮದ್ಯ ತರಲು, ಹಣ ನೀಡಲು ಕಿರುಕುಳ ಆರೋಪ

ಕಲಬುರಗಿ: ಹಾಸ್ಟೆಲ್‌ನಲ್ಲಿ ಮದ್ಯ ತಂದುಕೊಡುವಂತೆ ಹಾಗೂ 30 ಸಾವಿರ ರೂ. ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಯ ಮೇಲೆ ಸಹವಿದ್ಯಾರ್ಥಿಗಳೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಕಲಬುರಗಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ಚಿತ್ತಾಪುರದ ಸುಮಿತ್ ಎಂಬ ವಿದ್ಯಾರ್ಥಿ ಹೆಚ್‌ಕೆಎಸ್ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಓದುತ್ತಿದ್ದ. ಹಣ ನೀಡಲು ನಿರಾಕರಿಸಿದ್ದಕ್ಕೆ ರೋಷನ್, ಶರಣು ಸೇರಿದಂತೆ ಐವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಮಗನ ಸ್ಥಿತಿ ಕಂಡು ತಾಯಿ ಕಣ್ಣೀರು ಹಾಕಿದ್ದಾರೆ. ಈ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಾರ್ಡನ್ ವಿರುದ್ಧವೂ ಕ್ರಮಕ್ಕೆ ಸಂತ್ರಸ್ತನ ತಾಯಿ ಆಗ್ರಹಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *