ಬೆಂಗಳೂರು: ನಗರದ ದೊಮ್ಮಲೂರಿನ 100 ಅಡಿ ರಸ್ತೆಯ ಕಚೇರಿಗೆ ನುಗ್ಗಿದ ಪ್ರಭುರಾಜ್ ಎಂಬಾತ ಯುವತಿಯ ಕುತ್ತಿಗೆಗೆ ಚಾಕು ಹಿಡಿದು ಚಿನ್ನಾಭರಣ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಚಿನ್ನ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿ, ಯುವತಿಯನ್ನು ಕಚೇರಿಯಿಂದ ಹೊರಗೆ ಎಳೆಯಲು ಯತ್ನಿಸಿದ್ದಾನೆ. ಯುವತಿಯ ಚೀರಾಟ ಕೇಳಿದ ಕಚೇರಿ ಸಿಬ್ಬಂದಿ ಹಾಗೂ ಸ್ಥಳೀಯರು ಧೈರ್ಯದಿಂದ ಆರೋಪಿಯನ್ನು ಸುತ್ತುವರಿದು ಹಿಡಿದಿದ್ದಾರೆ. ಬಳಿಕ ಆತನ ಕೈಯಲ್ಲಿದ್ದ ಚಾಕುವನ್ನು ಕಸಿದುಕೊಂಡಿದ್ದಾರೆ. ಆರೋಪಿಯನ್ನು ಇಂದಿರಾನಗರ ಪೊಲೀಸರಿಗೆ ಒಪ್ಪಿಸಲಾಗಿದ್ದು, ಪೊಲೀಸರು ಬಂಧಿಸಿ ಚಾಕು ಜಪ್ತಿ ಮಾಡಿದ್ದಾರೆ. ಆರೋಪಿ ಹಿನ್ನೆಲೆ ಹಾಗೂ ಕೃತ್ಯದ ಉದ್ದೇಶದ ಬಗ್ಗೆ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

