Breaking News

ಆನೇಕಲ್​​ ಗುಜರಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಸಮೀಪದ ಕುಂಬಾರನಹಳ್ಳಿಯ ಗುಜರಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಪ್ಲಾಸ್ಟಿಕ್, ಕಾಗದ ಸೇರಿದಂತೆ ಅಪಾರ ಪ್ರಮಾಣದ ಗುಜರಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಪಕ್ಷದ ಬಾವುಟ ಹಿಡಿಯುವುದಕ್ಕಷ್ಟೇ ಸೀಮಿತನಾ ಮುಸ್ಲಿಂ ಮುಖಂಡರ ರಾಜಕೀಯ ಅಸ್ತಿತ್ವ..? ಸ್ವಾಭಿಮಾನಕ್ಕೆ ಬೆಲೆ ಇಲ್ವಾ..?

ಹುಬ್ಬಳ್ಳಿ–ಧಾರವಾಡದಲ್ಲಿ ಮುಸ್ಲಿಂ ಮುಖಂಡರಿಗೆ ಕವಡೆ ಕಾಸಿನ ಕಿಮ್ಮತ್ತೂ ಇಲ್ವಾ..? ಹುಬ್ಬಳ್ಳಿ–ಧಾರವಾಡದಲ್ಲಿ ಮುಸ್ಲಿಂ ಮುಖಂಡರಿಗೆ ಕವಡೆ ಕಾಸಿನ ಕಿಮ್ಮತ್ತೂ ಇಲ್ವಾ..? ಪಕ್ಷದ …

Leave a Reply

Your email address will not be published. Required fields are marked *