Breaking News

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲಿ ಹಣ ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಇನ್ನೊಂದೆಡೆ, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಪ ಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಸಿದ್ದಾರೆ. ಬೆಳಗಾವಿಯ ವಿವಿಧ ಸರ್ಕಾರಿ ಕಚೇರಿ ಹಾಗೂ ವಸತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಗಳಲ್ಲಿ ಆಹಾರ, ಸ್ವಚ್ಛತೆ ಮತ್ತು ಮೂಲಸೌಕರ್ಯ ಪರಿಶೀಲಿಸಿ ಅಗತ್ಯ ಸೂಚನೆ ನೀಡಿದ್ದಾರೆ. ಕಂದಾಯ ಸೇವೆಗಳನ್ನು ವಿಳಂಬವಿಲ್ಲದೆ ಸಾರ್ವಜನಿಕರಿಗೆ ಒದಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *