ಬೆಂಗಳೂರು: ಬನ್ನೇರುಘಟ್ಟ ಸಮೀಪದ ಹೊಮ್ಮದೇವನಹಳ್ಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಜೆರೊ ಕಾರು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಕಬಾಬ್ ಸೆಂಟರ್‌ಗೆ ನುಗ್ಗಿದೆ. ಕಳೆದ ತಿಂಗಳ 30ರಂದು ನಡೆದ ಘಟನೆಯಲ್ಲಿ ಬಿಸಿ ಎಣ್ಣೆ ಮೈಮೇಲೆ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಜೀನಾ ಬೇಗಂ ಚಲಾಯಿಸುತ್ತಿದ್ದ ಕಾರು ಅತಿವೇಗವಾಗಿ ಬಂದು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದೆ. ಈ ವೇಳೆ ಬಸವರಾಜ್, ಮುನಿಕೃಷ್ಣ ಮತ್ತು ಮಂಜೇಶ್ ಎಂಬುವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸರು ಕಾರು ಹಾಗೂ ಮಹಿಳಾ ಚಾಲಕಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಕುರಿತು ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

