Breaking News

ಬಾಳೆಹೊನ್ನೂರು | ಕುಡಿದ ಮತ್ತಿನಲ್ಲಿ ಜೀವ ಬೆದರಿಕೆ: ಅಧಿಕಾರಿ ವಿರುದ್ಧ ಪ್ರಕರಣ

ಚಿಕ್ಕಮಗಳೂರು: ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುದೀಪ್ ವಿರುದ್ಧ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕೊಡಿಗೆ ರವೀಂದ್ರ ಕೊಲೆ ಬೆದರಿಕೆ ಆರೋಪದಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಕುಡಿದ ಮತ್ತಿನಲ್ಲಿ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ದೂರು ನೀಡಲು ತೆರಳುತ್ತಿದ್ದಾಗ ಶೃಂಗೇರಿ ವೃತ್ತದಲ್ಲಿ ಅಡ್ಡಗಟ್ಟಿ, ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರವೀಂದ್ರ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುದೀಪ್ ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಮದ್ಯ ಸೇವಿಸಿರುವುದು ದೃಢಪಟ್ಟಿದೆ. ಅವರು ಚಲಾಯಿಸುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಯನ್ನು ಬಂಧಿಸುವಂತೆ ಸ್ಥಳೀಯರು ಠಾಣೆ ಎದುರು ಒತ್ತಾಯಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *