ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮದ್ದೂರು ಪಟ್ಟಣದಲ್ಲಿ ನಡೆದಿದೆ. ರಘು ಮತ್ತು ಪ್ರಕಾಶ್ ನಡುವೆ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿದ್ದು, ಇದನ್ನು ಬಿಡಿಸಲು ಹೋದ ನಂದನ್ ಮೇಲೆ ಶಿವರಾಜು ಎಂಬಾತ ಡ್ರ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ನಂದನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕೃತ್ಯದಲ್ಲಿ ಧನುಷ್, ಶಿವರಾಜು ಹಾಗೂ ನಿಖಿಲ್ ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಎಸ್‌ಪಿ ಶೋಭಾರಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
