ಯಾದಗಿರಿ: ವಕೀಲರ ಮೇಲಿನ ಹಲ್ಲೆ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ವಕೀಲರು ಮಂಗಳವಾರ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ನ್ಯಾಯಾಲಯದಿಂದ ಮೆರವಣಿಗೆ ನಡೆಸಿ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ವಕೀಲ ಮಂಜುನಾಥ ಅವರ ಕೊಲೆ ಹಾಗೂ ಗೌರಿಬಿದನೂರಿನ ಹಿರಿಯ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಅವರ ಮೇಲಿನ ಹಲ್ಲೆಯನ್ನು ಖಂಡಿಸಿದರು. ವಕೀಲರ ರಕ್ಷಣೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ವಕೀಲರ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತಂದು ಹಲ್ಲೆಕೋರರಿಗೆ ಏಳು ವರ್ಷಗಳ ಕಠಿಣ ಶಿಕ್ಷೆ ಹಾಗೂ ಜಾಮೀನು ರಹಿತ ಬಂಧನಕ್ಕೆ ಅವಕಾಶ ಕಲ್ಪಿಸಬೇಕು. ವಕೀಲರಿಗೆ ಪೊಲೀಸ್ ಭದ್ರತೆ ಒದಗಿಸಿ, ಹಲ್ಲೆ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news
