ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ₹11 ಲಕ್ಷ ಮೌಲ್ಯದ 74 ಗ್ರಾಂ ತೂಕದ ಮೂರು ಚಿನ್ನದ ಮಾಂಗಲ್ಯ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ. ಅ.20ರಂದು ಕೂಡ್ಲುಗೇಟ್ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಮುನಿಯಪ್ಪ ಕಾಂಪ್ಲೆಕ್ಸ್ ಬಳಿ ಓರ್ವ ಆರೋಪಿಯನ್ನು ಬಂಧಿಸಿ, ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಸರಗಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಬಂಧಿತನ ಮಾಹಿತಿ ಮೇರೆಗೆ ಮತ್ತೊಂದು ಸರವನ್ನು ಆತನ ಮನೆಯಲ್ಲಿ ಜಪ್ತಿ ಮಾಡಲಾಗಿದೆ. ಈ ಪ್ರಕರಣದ ತನಿಖೆಯಿಂದ ಬಂಡೇಪಾಳ್ಯ, ಹೆಬ್ಬಗೋಡಿ ಹಾಗೂ ಪರಪ್ಪನ ಅಗ್ರಹಾರ ಠಾಣೆಗಳ ಒಟ್ಟು 6 ಸರಗಳ್ಳತನ ಪ್ರಕರಣಗಳು ಪತ್ತೆಯಾಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

