Breaking News

ಮಾದಕ ವಸ್ತು ಪೂರೈಸುತ್ತಿದ್ದ ಮಹಿಳೆ ಬಂಧನ

ಮಂಗಳೂರು: ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ ನಸೀಮಾ (42) ಎಂಬ ಮಹಿಳೆಯನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಕೆ ವಾಸವಿದ್ದ ಪಂಪ್‌ವೆಲ್ ಉಜ್ಜೋಡಿಯ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿ ₹15.30 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ ಮಾಡಿದ್ದಾರೆ. ನ.1ರಂದು ದಾಖಲಾಗಿದ್ದ ಮಾದಕ ವಸ್ತು ಸೇವನೆ ಪ್ರಕರಣದ ಆರೋಪಿಗಳ ವಿಚಾರಣೆ ವೇಳೆ ನಸೀಮಾ ಮಾದಕ ವಸ್ತು ಪೂರೈಸುತ್ತಿದ್ದ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ಮಾದಕ ವಸ್ತು ವಶಪಡಿಸಿಕೊಂಡು ಆಕೆಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಮಂಗಳೂರು ನಗರದಾದ್ಯಂತ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದುದಾಗಿ ತಿಳಿದುಬಂದಿದೆ. ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಬಂಧನಕ್ಕೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಟ್ರೇಡಿಂಗ್ ಸಾಲಕ್ಕೆ ದೊಡ್ಡಮ್ಮನ ಸರ ಕದ್ದ ಯುವಕ 6 ಗಂಟೆಯಲ್ಲೇ ಸೆರೆ!

ಮೈಸೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಕಳೆದುಕೊಂಡು ಸಾಲ ಮಾಡಿಕೊಂಡಿದ್ದ ಯುವಕನೊಬ್ಬ, ಸ್ವಂತ ದೊಡ್ಡಮ್ಮನ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ …

Leave a Reply

Your email address will not be published. Required fields are marked *