Breaking News

ಮಣಿಪಾಲದಲ್ಲಿ ನಡುರಸ್ತೆಯಲ್ಲೇ ಯುವಕರ ಮಾರಾಮಾರಿ

ಉಡುಪಿ: ಮಣಿಪಾಲದಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ಯುವಕರ ಎರಡು ಗುಂಪುಗಳ ನಡುವೆ ನಡುರಸ್ತೆಯಲ್ಲೇ ಭೀಕರ ಹೊಡೆದಾಟ ನಡೆದಿದೆ. ಮೊದಲು ಇಬ್ಬರ ನಡುವೆ ಆರಂಭವಾದ ಜಗಳ ಬಳಿಕ ಎರಡು ಗುಂಪುಗಳ ಮಾರಾಮಾರಿಗೆ ತಿರುಗಿದೆ. ಜನಸಂಚಾರ ಹೆಚ್ಚಿರುವ ರಸ್ತೆಯಲ್ಲೇ ಯುವಕರು ಹೊಡೆದಾಡಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವೆಂದರೆ, ಮಣಿಪಾಲ ಪೊಲೀಸ್ ಠಾಣೆಯಿಂದ ಕೆಲವೇ ಅಂತರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪಬ್, ಬಾರ್‌ಗಳ ಮುಂದೆ ಪದೇಪದೇ ಗಲಾಟೆಗಳು ನಡೆಯುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಡರಾತ್ರಿಯವರೆಗೂ ಮದ್ಯ ಸೇವನೆಗೆ ಅವಕಾಶ ನೀಡುತ್ತಿರುವ ಆರೋಪ ಕೇಳಿಬಂದಿದ್ದು, ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *