ಬೆಂಗಳೂರು: ಮಗಳೊಂದಿಗೆ ಮನೆಯ ಕೊಠಡಿಯಲ್ಲಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಕೆಲಸಗಾರನನ್ನು ಪೈಪ್ ಹಾಗೂ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಕೊಲೆ ಮಾಡಿದ ಆರೋಪದ ಮೇಲೆ 45 ವರ್ಷದ ವ್ಯಾಪಾರಿಯನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಕಿರಣ್ (24) ಕೊಲೆಯಾದ ಯುವಕ. ವ್ಯಾಪಾರಿಯ ಮಗಳು ಹಾಗೂ ಕಿರಣ್ ನಡುವೆ ಸ್ನೇಹ ಬೆಳೆದಿತ್ತು. ಮಂಗಳವಾರ ಮನೆಗೆ ವಾಪಸ್ ಬಂದ ತಂದೆ ಇಬ್ಬರನ್ನೂ ಕಂಡು ಆಕ್ರೋಶಗೊಂಡು ಕಿರಣ್‌ನನ್ನು ಮನೆಯಲ್ಲೇ ಕೂಡಿಹಾಕಿ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ಕಿರಣ್‌ನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
