ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಯುವತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅ.31ರಂದು ಅಂಗಡಿಗೆ ಬಂದ ಆರೋಪಿ ಯುವತಿಯ ಕೈಗಳಿಗೆ ಫೆವಿಕ್ವಿಕ್ ಅಂಟಿಸಿ, ಚಾಕು ತೋರಿಸಿ ಬೆದರಿಸಿ ಚಿನ್ನದ ಸರ ಕಸಿದುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪತ್ನಿಯ ಚಿಕಿತ್ಸೆಗೆ ಹಣದ ಅವಶ್ಯಕತೆ ಇದ್ದುದರಿಂದ ಕೃತ್ಯ ಎಸಗಿರುವುದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
