ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ ಪರಿಚಯವಾದ ಆರೋಪಿ, ಬಳಿಕ ಯುವತಿಯ ಮೊಬೈಲ್ ಸಂಖ್ಯೆ ಪಡೆದು ಮಡಿವಾಳದ ಹೋಟೆಲ್‌ಗೆ ಆಹ್ವಾನಿಸಿದ್ದಾನೆ. ಹೋಟೆಲ್‌ನಲ್ಲಿ ಇಬ್ಬರೂ ಮದ್ಯ ಸೇವಿಸಿದ್ದು, ಯುವತಿಗೆ ನಶೆ ಬರುವಂತೆ ಮಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಬಳಿಕ ಯುವತಿ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಸಮೀರ್‌ನನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
