ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ರಾಘವೇಂದ್ರ ಸರ್ಕಲ್ ಬಳಿಯ ಹೂವಿನ ಮಾರುಕಟ್ಟೆಯಲ್ಲಿ ಸಣ್ಣ ವಿಚಾರಕ್ಕೆ ಎರಡು ಗ್ರಾಮಗಳ ಯುವಕರ ನಡುವೆ ಭೀಕರ ಮಾರಾಮಾರಿ ನಡೆದಿದೆ. ಹೂವಿನ ಬ್ಯಾಗ್ ಇಡುವ ವಿಚಾರವಾಗಿ ವೆಂಕಟಾಪುರ ಮತ್ತು ಕುಂಬಳಹಳ್ಳಿ ಗ್ರಾಮದ ಯುವಕರ ನಡುವೆ ಮಾತಿನ ಚಕಮಕಿ ಆರಂಭವಾಗಿ, ಬಳಿಕ ನೂಕಾಟ, ತಳ್ಳಾಟ ಹಾಗೂ ಹಲ್ಲೆಗೆ ತಿರುಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಸಂಬಂಧ ಹೊಸಕೋಟೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

