Breaking News

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಲಹಂಕ ನ್ಯೂ ಟೌನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹರೀಶ್ ಟಿ. ಅಲಿಯಾಸ್ ಹರಿ ಬಂಧಿತ ಆರೋಪಿ. ಅಕ್ಟೋಬರ್ 29ರಂದು ಕೃಷ್ಣ ಜ್ಯುವೆಲ್ಲರ್ಸ್‌ಗೆ ಬಂದಿದ್ದ ಈತ, ಎರಡು ಚಿನ್ನದ ಸರ ಹಾಗೂ ಏಳು ಉಂಗುರಗಳನ್ನು ಧರಿಸಿಕೊಂಡು ಕನ್ನಡಿಯಲ್ಲಿ ನೋಡಿಕೊಳ್ಳುವಂತೆ ನಟಿಸಿ, ಮಾಲೀಕರ ಗಮನ ಬೇರೆಡೆ ಸೆಳೆದು ಪರಾರಿಯಾಗಿದ್ದ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಿದ್ದ ₹13.20 ಲಕ್ಷ ಮೌಲ್ಯದ ಎರಡು ಚಿನ್ನದ ಸರ ಹಾಗೂ ಏಳು ಉಂಗುರಗಳನ್ನು ವಶಪಡಿಸಿಕೊಂಡಿದ್ದಾರೆ.

Share News

About BigTv News

Check Also

ಅಂತರ್ಜಾತಿ ವಿವಾಹ ಮಾಡಿಸಿದ್ದಕ್ಕೆ ದ್ವೇಷ – ಪುರೋಹಿತನನ್ನೇ ಕೊಚ್ಚಿ ಕೊಂದ ದುಷ್ಕರ್ಮಿ!

ಬೆಳಗಾವಿ: ಅಂತರ್ಜಾತಿ ವಿವಾಹ ಮಾಡಿಸಿಕೊಟ್ಟಿದ್ದಕ್ಕೆ ಜ್ಯೋತಿಷಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಾನಕಾಪುರದಲ್ಲಿ ನಡೆದಿದೆ. ಮಹಾರಾಷ್ಟ್ರದ ಮಂದಾರ್ ಅಜಿತ್ ರಾಂಡೆ …

Leave a Reply

Your email address will not be published. Required fields are marked *