Breaking News

ಡೇಟಿಂಗ್ ಆಯಪ್ ಪರಿಚಯ; ನಿರ್ಜನ ಪ್ರದೇಶದಲ್ಲಿ ಹಲ್ಲೆ, ದರೋಡೆ – ನಾಲ್ವರ ಬಂಧನ

ಬೆಂಗಳೂರು: ಡೇಟಿಂಗ್ ಆಯಪ್ ಮೂಲಕ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು ಭೇಟಿಯಾಗುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕು ತೋರಿಸಿ ಹಣ ದರೋಡೆ ಮಾಡಿರುವ ಘಟನೆ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಿಷಿರಾಜ್ ಸಿಂಗ್ (18), ವಂಶಿ (21), ವೆಂಕಟೇಶ್ (25) ಹಾಗೂ ದರ್ಶನ್ (24) ಬಂಧಿತರು. ಡೇಟಿಂಗ್ ಆಯಪ್ ಮೂಲಕ ಸಂತ್ರಸ್ತನಿಗೆ ಪರಿಚಯವಾಗಿದ್ದ ಆರೋಪಿ, ಭೇಟಿಯಾಗುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಕಾಯುತ್ತಿದ್ದ ಮೂವರೊಂದಿಗೆ ಸೇರಿ ಹಲ್ಲೆ ನಡೆಸಿ, ಚಾಕು ತೋರಿಸಿ ಬೆದರಿಸಿ ಮೊಬೈಲ್ ಹಾಗೂ ಯುಪಿಐ ಮೂಲಕ ಹಣ ವರ್ಗಾಯಿಸಿಕೊಂಡಿದ್ದಾರೆ. ಘಟನೆ ಬಗ್ಗೆ ಸಂತ್ರಸ್ತ ನೀಡಿದ ದೂರಿನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *