ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕ ಇಂದುಶೇಖರ್ ಎಂಬಾತ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಎರಡು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಸುನೀತಾ, ಅತ್ತೆ ರೂಪವತಿ, ಇಬ್ಬರು ಬಾಮೈದರು, ಇಬ್ಬರು ಸೊಸೆಯಂದಿರು ಹಾಗೂ ಏಳು ವರ್ಷದ ಬಾಲಕ ಹತ್ಯೆಯಾದವರು. ಪತ್ನಿ ತವರು ಮನೆಯವರೊಂದಿಗೆ ಸಂಬಂಧ ಮುಂದುವರಿಸಿದ್ದಕ್ಕೆ ಕೋಪಗೊಂಡಿದ್ದ ಆರೋಪಿ, ಒಬ್ಬೊಬ್ಬರನ್ನೇ ಕರೆಸಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ನಳಿನಿ ನಾಪತ್ತೆ ಪ್ರಕರಣದ ತನಿಖೆ ವೇಳೆ ಹತ್ಯೆ ಪ್ರಕರಣ ಬಯಲಾಗಿದೆ. ಮೃತದೇಹಗಳನ್ನು ನಂದಿಬೆಟ್ಟದ ಸುತ್ತಮುತ್ತ ಎಸೆದಿದ್ದ ಆರೋಪಿ, ಬಾಲಕನ ಶವ ಪತ್ತೆಯಾಗಿದೆ. ಉಳಿದ ಮೃತದೇಹಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
