ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಪತ್ನಿಗೆ ಚಿಕಿತ್ಸೆ ಕೊಡಿಸಿ ಬೈಕ್‌ನಲ್ಲಿ ಮನೆಗೆ ತೆರಳಲು ನಿಂತಿದ್ದ ವೇಳೆ ಪತ್ನಿಯ ಎದುರಲ್ಲೇ ಗುಂಡಿನ ದಾಳಿ ನಡೆಸಲಾಗಿದೆ. ಕೆಲವು ದಿನಗಳ ಹಿಂದೆ ಡಿಜೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಯಾಸೀನ್ ಭಾಗಿಯಾಗಿದ್ದ. ಇದೇ ದ್ವೇಷದಿಂದ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಯಾಸೀನ್ ಇನ್‌ಸ್ಟಾಗ್ರಾಂನಲ್ಲಿ ಭಯ ಹುಟ್ಟಿಸುವ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಗಾಂಧಿ ಚೌಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತದೇಹವನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರು ಹಾಗೂ ಸ್ನೇಹಿತರು ಜಮಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
