Breaking News

ಚಿನ್ನಾಭರಣ, ಹಣ ದರೋಡೆ ಆರೋಪ; 17 ವರ್ಷದ ಬಾಲಕ ಸೇರಿ ಮೂವರ ಬಂಧನ

ಕಾಸರಗೋಡು: ಲಾಡ್ಜ್ ಕೊಠಡಿಯಲ್ಲಿ ತಂಗಿದ್ದ ಯುವಕ ಮತ್ತು ಆತನ ಗೆಳತಿಯ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಆರೋಪದ ಮೇಲೆ 17 ವರ್ಷದ ಬಾಲಕ ಸೇರಿದಂತೆ ಮೂವರನ್ನು ಕಾಸರಗೋಡು ಟೌನ್ ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಉದೈಫ್ (22) ಮತ್ತು ಆತನ ಗೆಳತಿ ಲಾಡ್ಜ್‌ನಲ್ಲಿ ತಂಗಿದ್ದಾಗ ಆರೋಪಿಗಳು ಕೊಠಡಿಗೆ ನುಗ್ಗಿ ಹಲ್ಲೆ ನಡೆಸಿ, ಯುವತಿ ಧರಿಸಿದ್ದ ಕಿವಿಯೋಲೆಗಳನ್ನು ಕಸಿದುಕೊಂಡಿದ್ದಾರೆ. ಅಲ್ಲದೆ, ಎಟಿಎಂ ಕಾರ್ಡ್ ಕಸಿದುಕೊಂಡು ₹10 ಸಾವಿರ ಹಣವನ್ನೂ ದೋಚಿದ್ದಾರೆ ಎನ್ನಲಾಗಿದೆ. ಬಂಧಿತರನ್ನು ಸಾಬಿತ್ (30), ಅಮೀರ್ ಅಲಿ (30) ಹಾಗೂ 17 ವರ್ಷದ ಬಾಲಕ ಎಂದು ಗುರುತಿಸಲಾಗಿದೆ. ಯುವಕ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಜನರ ಹತ್ಯೆ; ಪತ್ನಿ ಮೇಲಿನ ದ್ವೇಷಕ್ಕೆ ಇಡೀ ಕುಟುಂಬವನ್ನೇ ಮುಗಿಸಿದ ಪತಿ!

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕ ಇಂದುಶೇಖರ್ ಎಂಬಾತ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ …

Leave a Reply

Your email address will not be published. Required fields are marked *