Breaking News

ಬೆಂಗಳೂರಲ್ಲಿ ಭೀಕರ ಸರಣಿ ಹತ್ಯೆ : ರುಬ್ಬು ಗುಂಡಿನಿಂದ ಚಜ್ಜಿ ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆ!

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕ ಇಂದುಶೇಖರ್ ಎಂಬಾತ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ತವರು ಮನೆಗೆ ಹೋಗುತ್ತಿದ್ದ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ದ್ವೇಷದಿಂದ ಅತ್ತೆ, ಇಬ್ಬರು ಬಾಮೈದರು, ಇಬ್ಬರು ಸೊಸೆಯಂದಿರು ಹಾಗೂ 7 ವರ್ಷದ ಬಾಲಕನನ್ನು ಒಬ್ಬೊಬ್ಬರನ್ನೇ ಮನೆಗೆ ಕರೆಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ನಳಿನಿ ನಾಪತ್ತೆ ಪ್ರಕರಣದ ತನಿಖೆ ವೇಳೆ ಹತ್ಯಾಕಾಂಡ ಬೆಳಕಿಗೆ ಬಂದಿದೆ. ನಂದಿಬೆಟ್ಟದ ಬಳಿ ಶೋಧ ನಡೆಸಿದ ಪೊಲೀಸರು ಬಾಲಕನ ಮೃತದೇಹ ಪತ್ತೆಹಚ್ಚಿದ್ದು, ಉಳಿದ ಮೃತದೇಹಗಳಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಜನರ ಹತ್ಯೆ; ಪತ್ನಿ ಮೇಲಿನ ದ್ವೇಷಕ್ಕೆ ಇಡೀ ಕುಟುಂಬವನ್ನೇ ಮುಗಿಸಿದ ಪತಿ!

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕ ಇಂದುಶೇಖರ್ ಎಂಬಾತ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ …

Leave a Reply

Your email address will not be published. Required fields are marked *