Breaking News

ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಮೃತ್ಯು

ಕಲಬುರಗಿ: ನಗರದ ರಾಜಾಪುರ ರಸ್ತೆಯ ಬಾಬು ಜಗಜೀವನ ರಾಮ್ ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು 25 ವರ್ಷದ ನರ್ಸಿಂಗ್ ವಿದ್ಯಾರ್ಥಿ ಮುಜಾಹೀದ್ ಪಟೇಲ್ ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲೂಕಿನ ಕುಂದನೂರು ಗ್ರಾಮದ ನಿವಾಸಿಯಾಗಿದ್ದ ಅವರು ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಸಮೀಪದ ಅಂಬೇಡ್ಕರ್ ವಸತಿ ನಿಲಯದಲ್ಲಿ ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಇದರ ಬೆನ್ನಲ್ಲೇ ಮತ್ತೊಂದು ವಸತಿ ನಿಲಯದಲ್ಲಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಆತಂಕ ಮೂಡಿಸಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *