Breaking News

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರೂ ಬೆಂಗಳೂರಿನ ಮೂಲದವರಾಗಿದ್ದು, ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸಹನಾ 8 ವರ್ಷಗಳ ಹಿಂದೆ ವೀರೇಶ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಕಳೆದ 2–3 ವರ್ಷಗಳಿಂದ ರಾಹುಲ್ ಜೊತೆ ಆತ್ಮೀಯತೆ ಬೆಳೆಸಿಕೊಂಡಿದ್ದಳು. ಈ ವಿಚಾರವಾಗಿ ಪತಿ ವೀರೇಶ್ ಜೊತೆ ಹಲವು ಬಾರಿ ಜಗಳ ನಡೆದಿತ್ತು ಎನ್ನಲಾಗಿದೆ. ಸೋಮವಾರವೂ ದಂಪತಿ ನಡುವೆ ಗಲಾಟೆಯಾಗಿದ್ದು, ರಾಹುಲ್ ಜೊತೆ ಬದುಕುವುದಾಗಿ ಸಹನಾ ಹೇಳಿದ್ದಳು. ಬಳಿಕ ಇಬ್ಬರೂ ಮಂಡ್ಯದಲ್ಲಿ ಭೇಟಿಯಾಗಿ, ಪತಿಯ ವಿರುದ್ಧ ದೂರು ನೀಡಲು ನಿರ್ಧರಿಸಿದ್ದರು. ಆದರೆ ಪತಿಯ ಬೆದರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *