Breaking News

ಒಂದೇ ಕುಟುಂಬದ 7 ಜನರ ಹತ್ಯೆ ಪ್ರಕರಣ: ತಂದೆಯ ಕೃತ್ಯಕ್ಕೆ ಮಗಳೇ ಸಾಥ್: ವಿವಿಧ ಸ್ಥಳಗಳಲ್ಲಿ ಮೃತದೇಹಗಳನ್ನು ಎಸೆದಿರುವ ಆರೋಪಿ

ಬೆಂಗಳೂರಿನ ರಾಜಾಜಿನಗರದಲ್ಲಿ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕ ಇಂದುಶೇಖರ್‌ನನ್ನು ಪೊಲೀಸರು ಬಂಧಿಸಿದ್ದಾರೆ. 15ರಿಂದ 20 ದಿನಗಳ ಅವಧಿಯಲ್ಲಿ ಒಬ್ಬೊಬ್ಬರನ್ನೇ ಮನೆಗೆ ಕರೆಸಿ ಕೊಲೆ ಮಾಡಿರುವುದಾಗಿ ಆರೋಪಿಸಲಾಗಿದೆ. ಪತ್ನಿ ಸುನೀತಾ ತವರಿಗೆ ಹೋಗುತ್ತಿದ್ದ ವಿಚಾರಕ್ಕೆ ಕುಟುಂಬದೊಂದಿಗೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ದ್ವೇಷದಿಂದ ಆರೋಪಿ ಮೊದಲು ಪತ್ನಿಯನ್ನು ರುಬ್ಬುಗುಂಡಿನಿಂದ ಹೊಡೆದು ಕೊಲೆ ಮಾಡಿ, ಮೃತದೇಹವನ್ನು ನಂದಿ ಬೆಟ್ಟದಲ್ಲಿ ಎಸೆದಿದ್ದಾನೆ. ಬಳಿಕ ಕುಟುಂಬದ ಇತರ ಆರು ಮಂದಿಯನ್ನು ಒಬ್ಬೊಬ್ಬರಾಗಿ ಮನೆಗೆ ಕರೆಸಿ ಹತ್ಯೆ ಮಾಡಿ, ಮೃತದೇಹಗಳನ್ನು ಬೇರೆ ಬೇರೆ ಸ್ಥಳಗಳಲ್ಲಿ ಎಸೆದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ವೇಳೆ ಬಾಲಕ ಪುನೀತ್ ಮೃತದೇಹ ಮಾತ್ರ ಪತ್ತೆಯಾಗಿದ್ದು, ಉಳಿದವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ನಡುವೆ ಆರೋಪಿಯ ಪಿಯುಸಿ ಓದುತ್ತಿರುವ ಮಗಳು ಕೂಡ ತಂದೆಯ ಕೃತ್ಯಕ್ಕೆ ಸಹಕರಿಸಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಮೃತದೇಹ ಸಾಗಿಸಲು ಬಳಸಿದ ಕಾರು ಹಾಗೂ ರುಬ್ಬುಗುಂಡಿಯನ್ನು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಮೃತ್ಯು

ಕಲಬುರಗಿ: ನಗರದ ರಾಜಾಪುರ ರಸ್ತೆಯ ಬಾಬು ಜಗಜೀವನ ರಾಮ್ ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು 25 ವರ್ಷದ ನರ್ಸಿಂಗ್ …

Leave a Reply

Your email address will not be published. Required fields are marked *