ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಅನಮೋಡ್ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಗೋವಾದಿಂದ ಮದ್ಯ ಸಾಗಿಸುತ್ತಿದ್ದ ಲಾರಿಯನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ₹1.20 ಲಕ್ಷ ಮೌಲ್ಯದ 267 ಲೀಟರ್ ಮದ್ಯ ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಬಕಾರಿ ಅಧಿಕಾರಿಗಳ ಕಣ್ಣುತಪ್ಪಿಸಲು ಲಾರಿಯಲ್ಲಿ ರಹಸ್ಯ ಕಂಪಾರ್ಟ್‌ಮೆಂಟ್ ನಿರ್ಮಿಸಿ ಮದ್ಯ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸಿದಾಗ ಅಡಗಿಸಿಟ್ಟಿದ್ದ ಮದ್ಯ ಪತ್ತೆಯಾಗಿದೆ. ತಮಿಳುನಾಡು ನೋಂದಣಿಯ ಲಾರಿಯನ್ನು ಜಪ್ತಿ ಮಾಡಿರುವ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
