Breaking News

ಇದು ಬೇಲಿಯೇ ಎದ್ದು ಹೊ ಮೇಯ್ದ ಕಥೆ! ಹೊಯ್ಸಳ ವಾಹನದಲ್ಲಿ ಬಂದು ವಸೂಲಿ ಆರೋಪದಲ್ಲಿ ಇಬ್ಬರು ಪೊಲೀಸರ ಬಂಧನ

ಮಂಗಳೂರಿನಲ್ಲಿ ಗಸ್ತಿನ ಹೆಸರಿನಲ್ಲಿ ಯುವಕನಿಂದ ಹಣ ವಸೂಲಿ ಹಾಗೂ ಹಲ್ಲೆ ನಡೆಸಿದ ಆರೋಪದಡಿ ಹೊಯ್ಸಳ ವಾಹನದ ಇಬ್ಬರು ಪೊಲೀಸ್ ಸಿಬ್ಬಂದಿ ಶಿವರಾಜ್ ಮತ್ತು ಹಿರಣ್ಣ ಬೆನ್ನಿ ಅವರನ್ನು ಬಂಧಿಸಲಾಗಿದೆ. ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ನೆಹರು ಮೈದಾನದಲ್ಲಿ ವಾಕಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದ ರವಿರಾಜ್ ಅವರನ್ನು ತಡೆದು ಹಲ್ಲೆ ನಡೆಸಿ, ಮೊಬೈಲ್ ಕವರ್‌ನಲ್ಲಿದ್ದ ₹300 ಹಣ ಕಸಿದುಕೊಂಡಿದ್ದಾರೆ ಎನ್ನಲಾಗಿದೆ. ಮರುದಿನ ಮತ್ತೆ ಬೆದರಿಸಿ ಎಟಿಎಂ ಕಾರ್ಡ್‌ಗಳು, ₹1,000 ನಗದು ಹಾಗೂ ಬೈಕ್ ಕೀ ಪಡೆದು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ರವಿರಾಜ್ ನೀಡಿದ ದೂರಿನ ಮೇರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಉಮಾನಾಥ್ ವಿರುದ್ಧ ತನಿಖೆ ಮುಂದುವರಿದಿದೆ.

Share News

About BigTv News

Check Also

ನಶೆಯಲ್ಲಿದ್ದ ಯುವತಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಬೆಂಗಳೂರಿನಲ್ಲಿ ಮದ್ಯದ ನಶೆಯಲ್ಲಿದ್ದ 26 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಸಮೀರ್ ಎಂಬಾತನನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *